
ಕಾಂಗ್ರೇಸ್ ಪಕ್ಷ ಅಂಬೇಡ್ಕರರವರಿಗೆ ಮಾಡಿದ ಅವಮಾನ ಇತಿಹಾಸ ಪುಟದಲ್ಲಿ ಧಾಖಲೆ – ಕಡಗದ.
ರೋಣ : ಸತ್ಯಮಿಥ್ಯ ( ಡಿ -21).
ದೆಹಲಿಯಲ್ಲಿ ಬಿಜೆಪಿ ಸಂಸದರ ಮೇಲೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರ ವಿಧಾನ ಪರಿಷತ್ ಸದಸ್ಯ ಮತ್ತು ಮಾಜಿ ಸಚಿವರಾದ ಸಿ.ಟಿ. ರವಿ ಅವರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಬಂದಿಸಿ, ಹಲ್ಲೆ ನಡೆಸಿರುವುದು ಖಂಡನೀಯ ಎಂದು ರೋಣ ಮಂಡಲ ಬಿಜೆಪಿ ಅಧ್ಯಕ್ಷ ಪತ್ರಿಕಾ ಪ್ರಕಟಣೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತಿಹಾಸದಲ್ಲಿ ಅಂಬೇಡ್ಕರರವರಿಗೆ ಅತ್ಯಂತ ಹೀನಾಯವಾಗಿ ನಡೆಸಿಕೊಂಡದ್ದು ಕಾಂಗ್ರೇಸ್. ಬಾಬಾಸಾಹೇಬರನ್ನು ಕುತಂತ್ರದಿಂದ ಎರಡು ಭಾರಿ ಸೋಲಿಸಿದ್ದು ಕಾಂಗ್ರೇಸ್. ರಾಹುಲ್ ಗಾಂಧಿ ಭಾರತ ಸಂವಿದಾನ ಪುಸ್ತಕ ಕೈಯಲ್ಲಿ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಮಾತ್ರಕ್ಕೆ ಇತಿಹಾಸ ಮರೆಯಲಿಕ್ಕೆ ಸಾಧ್ಯವಿಲ್ಲ. ಪ್ರಸ್ತುತ ಸಂದರ್ಭದಲ್ಲಿ ಕಾಂಗ್ರೇಸ್ ಪಕ್ಷ ಮತ್ತು ನೆಹರೂ ಆದಿಯಾಗಿ ದಲಿತರನ್ನು ಮತ್ತು ಅಂಬೇಡ್ಕರ್ ವಿರುದ್ಧ ನಡೆದುಕೊಂಡ ಕರಾಳ ಪುಟಗಳು ಇತಿಹಾಸದಲ್ಲಿ ದಾಖಲೆಯಾಗಿವೆ.
ಮಾತೆತ್ತಿದರೆ ಸಂವಿಧಾನ ರಕ್ಷಣೆ ಮಾತನ್ನಾಡುವ ಸಿ ಎಮ್. ಒಬ್ಬ ಮಾಜಿ ಸಚಿವ, ಹಾಲಿ ಪರಿಷತ್ ಸದಸ್ಯರ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಅಕ್ಷರಶಃ ಭಯೋತ್ಪಾದಕರಂತೆ ನಡೆದುಕೊಳ್ಳುತ್ತಿದೆ. ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ನೋಡಿದರೆ ತುಘಲಕ್ ಆಡಳಿತ ಮೀರಿಸುತ್ತದೆ.
ಈ ಸರ್ಕಾರದಲ್ಲಿ ಶಾಸಕರಿಗೆ ವಿಧಾನಸೌಧದಲ್ಲಿ ರಕ್ಷಣೆ ಇಲ್ಲದಂತಾಗಿದೆ. ಸಚಿವರ ಬೆಂಬಲಿಗರು ಬೆಳಗಾವಿಯ ಸುವರ್ಣ ಸೌಧದೊಳಗೆ ನುಗ್ಗಿ ಶಾಸಕರೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆಯಿಂದ ಜನಸಾಮಾನ್ಯರಿಗೆ ರಕ್ಷಣೆ ಇಲ್ಲದ ವಾತಾವರಣ ನಿರ್ಮಾಣವಾಗಿದೆ. ಈ ಒಂದು ಪ್ರಕರಣ ರಾಜ್ಯದ ಇತಿಹಾಸಕ್ಕೆ ಕಪ್ಪುಚುಕ್ಕೆಯಾಗಿದೆ.
ಯಾರ ಮೇಲೆಯೇ ಆರೋಪ ಬಂದಾಗಲೂ ಕಾನೂನಾತ್ಮಕವಾಗಿ ನಡೆದುಕೊಳ್ಳಬೇಕೇ ವಿನಃ ಭಯೋತ್ಪಾದಕರ ರೀತಿಯಲ್ಲಿ ಸುವರ್ಣ ಸೌಧದೊಳಗೆ ನುಗ್ಗಿ ಹಿಂಸಾತ್ಮಕ ಪ್ರತಿಕ್ರಿಯೆ ನೀಡಿರುವುದು ಅಕ್ಷಮ್ಯ ಅಪರಾಧ.
ಈ ರೀತಿ ಜನಪ್ರತಿನಿದಿನಗಳ ಮೇಲೆ ಸುಳ್ಳು ಆರೋಪ ಮಾಡುತ್ತಾ. ಜನರ ಗಮನವನ್ನು ರಾಜ್ಯದಲ್ಲಿ ನಡೆದಿರುವ ಸರಣಿ ಭ್ರಷ್ಟಾಚಾರ, ಹಗರಣ ಮತ್ತು ಬಾಣಂತಿಯರ ಸಾವಿನ ಪ್ರಕರಣ. ಸುವರ್ಣ ಸೌಧದ ಎದುರು ಪ್ರತಿಭಟಿಸಿದ ಪಂಚಮಸಾಲಿ ಮೀಸಲಾತಿ ಹೋರಾಟಗಾರರಿಗೆ ಲಾಠಿ ಏಟು ಪ್ರಕರಣದ ದಿಕ್ಕು ತಪ್ಪಿಸಲು ಸಿದ್ದರಾಮಯ್ಯ ಸರ್ಕಾರದಿಂದ ಸುಳ್ಳು ಮೊಕದ್ದಮೆ ದಾಖಲಿಸುತ್ತಿದೆ.
ಹೆಬ್ಬಾಳ್ಕರ್ ಬೆಂಬಲಿತ ಗೂಂಡಾಗಳಿಗೆ ಸುವರ್ಣ ಸೌಧದ ಪ್ರವೇಶಕ್ಕೆ ಅವಕಾಶ ನೀಡಿ, ಸಿ ಟಿ ರವಿಯವರ ಮೇಲೆ ಹಲ್ಲೆಗೆ ಯತ್ನ ಮಾಡಲು ಅವಕಾಶ ನೀಡಿದ್ದು ಖಂಡನೀಯ ಎಂದಿದ್ದಾರೆ.
ವರದಿ : ಚನ್ನು. ಎಸ್.