
ಗಜೇಂದ್ರಗಡ ಪುರಸಭೆ ಅಧ್ಯಕ್ಷ – ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ – ಸಾಮಾನ್ಯ ಮಹಿಳೆ ಮೀಸಲಾತಿ ಪ್ರಕಟ.

ಗಜೇಂದ್ರಗಡ – ಸತ್ಯಮಿಥ್ಯ ( ಆಗಸ್ಟ್ -05).
15 ತಿಂಗಳುಗಳಿಂದ ನೆನೆಗುದಿಗೆ ಬಿದ್ದಿದ್ದ ಪುರಸಭೆಯ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನದ ಮೀಸಲಾತಿಯನ್ನು ಇಂದು ಹೊರಬಿದ್ದಿದೆ.
ಗಜೇಂದ್ರಗಡ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ – ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ- ಸಾಮಾನ್ಯ ಮಹಿಳೆ ಮೀಸಲಾತಿ ಘೋಷಣೆಯಾಗಿದೆ.
ಪುರಸಭೆ ಸದಸ್ಯರ ಅವಧಿ ಕೇವಲ ಒಂದು ವರ್ಷವಿದ್ದು ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಸಾಮಾನ್ಯ ಮತ್ತು ಸಾಮಾನ್ಯ ಮಹಿಳೆಯಾಗಿರುವುದರಿಂದ ಎಲ್ಲರಿಗೂ ಅವಕಾಶಗಳಿದ್ದು ರಾಜಕೀಯ ಚಟುವಟಿಕೆಗಳು ಗರಿಗೆದರಲಿವೆ.
ವರದಿ : ಸುರೇಶ ಬಂಡಾರಿ.