ಅನ್ನದಾನೇಶ್ವರ ಕಾಲೇಜಿನಲ್ಲಿ ʼಸಿಂಧೂರ-2025ʼ ಸಮಾರಂಭ ಜೂನ್ 27ಕ್ಕೆ.
ಪ್ರಥಮ ಪಿಯು ವಿದ್ಯಾರ್ಥಿಗಳ ಸ್ವಾಗತ ಹಾಗೂ ವಿವಿಧ ಸಾಂಘಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

ಅನ್ನದಾನೇಶ್ವರ ಕಾಲೇಜಿನಲ್ಲಿ ʼಸಿಂಧೂರ-2025ʼ ಸಮಾರಂಭ ಜೂನ್ 27ಕ್ಕೆ.
ಪ್ರಥಮ ಪಿಯು ವಿದ್ಯಾರ್ಥಿಗಳ ಸ್ವಾಗತ ಹಾಗೂ ವಿವಿಧ ಸಾಂಘಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ
ಗಜೇಂದ್ರಗಡ:ಸತ್ಯಮಿಥ್ಯ (ಜೂ-26)
ಪಟ್ಟಣದ ಪುರ್ತಗೇರಿ ಕ್ರಾಸ್ ಬಳಿ ಇರುವ ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪ್ರಸಕ್ತ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ವಿವಿಧ ಸಾಂಘಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ʼಸಿಂಧೂರ-2025ʼ ಜೂನ್ 27 ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಸಾನಿಧ್ಯವನ್ನು ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿಯ ಅಧ್ಯಕ್ಷರಾದ ಶ್ರೀ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು ವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಕಾಲೇಜಿನ ಚೇರಮನ್ನರಾದ ವೀರಯ್ಯ ವಿ. ವಸ್ತ್ರದ ವಹಿಸಲಿದ್ದು, ನರೇಗಲ್‌ನ ನಿವೃತ್ತ ಪ್ರಾಚಾರ್ಯ ಬಿ. ಎಸ್. ಚೇಗರಡ್ಡಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಗಜೇಂದ್ರಗಡದ ನಿವೃತ್ತ ಶಿಕ್ಷಕ ತಾರಸಿಂಗ್ ರಾಠೋಡ, ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿಯ ಪ್ರಧಾನ ಕಾರ್ಯದರ್ಶಿ ರವೀಂದ್ರನಾಥ ದೊಡ್ಡಮೇಟಿ, ಆಡಳಿತಾಧಿಕಾರಿ ಎನ್. ಆರ್. ಗೌಡರ, ಶೈಕ್ಷಣಿಕ ಮೇಲ್ವಿಚಾರಕ ಶಿವಾನಂದ ಮಠದ, ಆಡಳಿತ ಮಂಡಳಿ ಸದಸ್ಯರಾದ ಮುದಕಪ್ಪ ತೊಂಡಿಹಾಳ, ಸದಾಶಿವ ಕರಡಿ, ಎ. ಆರ್. ನಿಂಬಲಗುಂದಿ ಸೇರಿದಂತೆ ಅನೇಕ ಅಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಪಿಯು ಪ್ರಾಚಾರ್ಯ ವಸಂತರಾವ್ ಗಾರಗಿ ಪ್ರಕಟಣೆಯಲ್ಲಿ ತಿಳಿಸಿದರು.