
ಶ್ರೀ ಅನ್ನದಾನೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಪ್ರಮಾಣವಚನದ ಮೂಲಕ ಬಾಲಕಾರ್ಮಿಕ ವಿರೋಧಿ ದಿನ ಆಚರಣೆ.
ಗಜೆಂದ್ರಗಡ : ಸತ್ಯಮಿಥ್ಯ (ಜೂ-13)
ಪಟ್ಟಣದ ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಬಾಲ ಕಾರ್ಮಿಕ ವಿರೋಧಿ ದಿನವನ್ನು ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಂದ ಪ್ರಮಾಣವಚನ ಮಾಡುವುದರ ಮೂಲಕ ಆಚರಣೆ ಮಾಡಲಾಯಿತು.
ವಿದ್ಯಾರ್ಥಿಗಳಿಗೆ ಬಾಲಕಾರ್ಮಿಕ ವಿರೋಧಿ ದಿನ ಪ್ರಮಾಣವಚನವನ್ನು ಕಾಲೇಜಿನ ಉಪನ್ಯಾಸಕರಿಂದ ನನ್ನ ಮನೆಯ ಸುತ್ತಮುತ್ತ ಬಾಲಕಾರ್ಮಿಕ ಪದ್ಧತಿ ಕಂಡು ಬಂದರೆ ಅದನ್ನು ವಿರೋಧಿಸುತ್ತೇನೆ ಬಾಲಕಾರ್ಮಿಕ ಪದ್ಧತಿ ತಡೆಗಟ್ಟಲು ಪ್ರಯತ್ನಿಸುತ್ತೇನೆ ಶಾಲೆ ಹೊರಗುಳಿದ ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸಲು ಪೋಷಕರಿಗೆ ಮನವರಿಕೆ ಮಾಡುತ್ತೇನೆ ಬಾಲಕಾರ್ಮಿಕರು ತಯಾರಿಸಿದ ಯಾವುದೇ ವಸ್ತು ಉಪಯೋಗಿಸುವುದಿಲ್ಲ.ಬಾಲಕಾರ್ಮಿಕರ ಸೇವೆ ಪಡೆಯುವುದಿಲ್ಲ. ಎಂದು ವಿದ್ಯಾರ್ಥಿಗಳಿಂದ ಪ್ರಮಾಣವಚನದ ಮೂಲಕ ಬಾಲಕಾರ್ಮಿಕ ವಿರೋಧಿ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರಾದ ವಸಂತ ರಾವ್ ಗಾರಗಿ ಕಾಲೇಜಿನ ಎಲ್ಲ ಉಪನ್ಯಾಸಕರು ಸಿಬ್ಬಂದಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ:ಮುತ್ತು ಗೋಸಲ್