ಏಳು ದಿನಗಳೊಳಗಾಗಿ ಸಮಸ್ಯೆ ಬಗೆಹರಿಸದೆ ಇದ್ದಲ್ಲಿ ಅನಿರ್ದಿಷ್ಟವಧಿ ಧರಣಿ ಎಚ್ಚರಿಕೆ.
ಗಜೇಂದ್ರಗಡ:ಸತ್ಯಮಿಥ್ಯ (ಡಿ -19)
ಬೀದಿ ಬದಿಯ ವ್ಯಾಪಾರಿಗಳ ಸಮಸ್ಯೆಯನ್ನು ತ್ವರಿತಗತಿಯಲ್ಲಿ ಪರಿಹರಿಸಲು ಜನಪ್ರತಿನಿಧಿಗಳು, ಹಾಗೂ ಅಧಿಕಾರಿಗಳು ಮುಂದಾಗಬೇಕು ಎಂದು ಒತ್ತಾಯಿಸಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಬೀದಿ ಬದಿ ವ್ಯಾಪಾರಿಗಳು ಸಂಘ (ರಿ) ತಾಲೂಕು ಸಮಿತಿ ನೇತೃತ್ವದಲ್ಲಿ ತಹಶಿಲ್ದಾರರ, ಪಿಎಸ್ಐ ಹಾಗೂ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಸಂಘದ ಅಧ್ಯಕ್ಷ ಶಾಮೀದಸಾಬ ದಿಂಡವಾಡ ಮಾತನಾಡಿ ಬೀದಿ ಬದಿಯ ವ್ಯಾಪಾರಿಗಳ ಸಮಸ್ಯೆಗಳಿಗೆ ಹಾಗೂ ಕುಂದು ಕೊರತೆಗಳ ಪರಿಹಾರಕ್ಕಾಗಿ ಮತ್ತು ಹಕ್ಕೊತ್ತಾಯಸುವ ಕುರಿತು ತಹಶಿಲ್ದಾರರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಬೀದಿ ಬದಿಯ ವ್ಯಾಪಾರಿಗಳಿಗೆ ತ್ವರಿತಗತಿಯಲ್ಲಿ ನ್ಯಾಯ ಒದಗಿಸಬೇಕು ಎಂದರು.
ಪ್ರಧಾನ ಕಾರ್ಯದರ್ಶಿ ಪೀರು ರಾಠೋಡ ಮಾತನಾಡಿ ಗಜೇಂದ್ರಗಡ ನಗರವು ಎಲ್ಲಾ ರೀತಿಯ ವ್ಯಾಪಾರಿಗಳ ಅನುಕೂಲ ಇರುವ ನಗರ ಗಜೇಂದ್ರಗಡ ವಾಗಿದೆ.
ಪಟ್ಟಣವು ಜಿಲ್ಲೆಯಲ್ಲಿಯೇ ಶರವೇಗದಲ್ಲಿ ಬೆಳೆಯುತ್ತಿರುವ ನಗರವಾಗಿದ್ದು ಇಲ್ಲಿನ ಸುತ್ತ ಮುತ್ತಲಿನ ಜನರಿಗೆ ವ್ಯಾಪಾರಸ್ಥರಿಗೆ ಇದೊಂದು ಜೀವಾಳವಾಗಿದೆ. ಧೀಡಿರ ಅಂತ ಮಾರುಕಟ್ಟೆ ಸ್ಥಳಾಂತರವಾಗಿ ಎಷ್ಟೋ ಬಡ ಕುಟುಂಬಗಳು ಇದೀಗ ಬೀದಿಗೆ ಬರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸರಿಪಡಿಸಲು ಮುಂದಾಗಬೇಕು ಎಂದರು.
ಬೀದಿ ಬದಿಯ ವ್ಯಾಪಾರಿಗಳ ಮೇಲೆ ದೌರ್ಜನ್ಯ ವಿನಾಕಾರಣ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಾಜ್ಯದಲ್ಲಿ ಇಲ್ಲದೇ ಇರುವ ಬೀದಿ ಬದಿ ವ್ಯಾಪಾರಸ್ಥರ ಕಾಯ್ದೆ, ಮೇಲಾಧಿಕಾರಿಗಳ ಒತ್ತಡದ ಮೇರೆಗೆ ಸ್ಥಳೀಯ ಪೋಲಿಸ್ ಸಿಬ್ಬಂದಿಗಳು ಗಜೇಂದ್ರಗಡದಲ್ಲಿ ಮಾತ್ರ ಇದೆ ಎಂಬಂತೆ ವರ್ತಿಸುತ್ತಿದ್ದಾರೆ.
ಬೀದಿ ಬದಿಯ ವ್ಯಾಪಾರಿಗಳ ವಸ್ತುಗಳನ್ನು ಪೋಲಿಸ್ ಅಧಿಕಾರಿಗಳು ಮನಬಂದಂತೆ ಕಸಿದುಕೊಂಡು ಹೊಗುವುದು, ಸುಳ್ಳು ಪ್ರಕರಣ ದಾಖಲಿಸುವುದು ಇದರಿಂದ ವ್ಯಾಪಾರ ಮಾಡುವುದು ಕಷ್ಟವಾಗುತ್ತದೆ ಇದರಿಂದ ನಮಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕಾರ್ಮಿಕರ ಮುಖಂಡರಾದ ಬಾಲು ರಾಠೋಡ, ಎಂ ಎಸ್ ಹಡಪದ, ಚೌಡಮ್ಮ ಯಲ್ಪು, ಮೈಬೂಸಾಬ್ ಮಾಲ್ದಾರ, ಮುತ್ತಣ್ಣ ರಾಠೋಡ, ಅಂಬರೇಶ ಚವ್ಹಾಣ, ಮಾರುತಿ ಗೊಂದಳೆ, ಮುತ್ತಣ್ಣ ತೇಜಪ್ಪ ರಾಠೋಡ, ವಿಷ್ಣು ಚಂದುಕರ, ಮಹಾಂತೇಶ ಹೀರೇಮಠ, ಬಡಿಗೇರ ಪರಸುರಾಮ ಗಂಗಾಧರ ಸತ್ಯನ್ಯವರ, ಯಮನೂರಸಾಬ ಗಾದಿ, ಮರ್ತುಜಾ ದಿಂಡವಾಡ, ಅಶೋಕ್ ಚವ್ಹಾಣ,ಕಳಕಪ್ಪ ಮಾಳೋತ್ತರ, ರಾಜುಪಾಲ.ಅಲ್ಲಾಬಕ್ಷಿ ಮುಚ್ಚಾಲಿ, ಸುರೇಶ್ ಅಕ್ಕಸಾಲಿ, ನಾಗರಾಜ ಆಜೀರ,ದೇವಕ್ಕೆ ರಾಠೋಡ, ಭದ್ರೇಶ್ ರಾಠೋಡ ದಾನಪ್ಪ ರಾಠೋಡ. ಮಂಜುನಾಥ ಚವ್ಹಾಣ. ನಾಗಪ್ಪ ಅಜ್ಮೀರ್ ಮುಂತಾದವರು ಭಾಗವಹಿಸಿದ್ದರು.
*ಪ್ರಮುಖ ಬೇಡಿಕೆಗಳು*
1) ಡಬಲ್ ರೋಡ ಭಾಗವಾದ ದುರ್ಗಾ ಸರ್ಕಲ್ ದಿಂದ ಕೆ.ಕೆ. ಸರ್ಕಲ್ 4 ಭಾಗದಲ್ಲಿ 2004 ಕಾಯ್ದೆ ಅಡಿಯಲ್ಲಿ ಅವಕಾಶ ನೀಡಬೇಕು.
2) ಸಂಬಂಧಪಟ್ಟ ಶಾಸಕರು ಪುರಸಭೆ ಮುಖ್ಯಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸೇರಿ ಎಲ್ಲಾ ವ್ಯಾಪಾರ ನಡುವೆ ಒಂದು ಜಂಟಿ ಸಭೆಯನ್ನು ನಡೆಸಿ ತಿರ್ಮಾನ ತೆಗೆದುಕೊಳ್ಳಬೇಕು.
3) ತರಕಾರಿ ಮಾರುಕಟ್ಟಿಗೆ ಪ್ರತ್ಯೇಕ ಸ್ಥಳ ಮೂಲ ಭೂತ ಸೌಕರ್ಯ ಕಲ್ಪಿಸಬೇಕು.
4) ಹಣ್ಣು,ಎಗ್ ರೈಸ್, ಕಬ್ಬಿನ ಹಾಲು, ಬಟ್ಟೆ ವ್ಯಾಪಾರ ಚಪ್ಪಲಿ, ಎಲೆ ಅಡಿಕೆ, ಪಾನಿಪುರಿ ಮಾರುವ ಎಲ್ಲಾ ವ್ಯಾಪಾರಸ್ತರಿಗೆ ಬೀದಿಯಲ್ಲಿ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಬೇಕು.
5) ಬೀದಿ ಬದಿಯ ವ್ಯಾಪಾರಿಗಳ ಮೇಲೆನ ದೌರ್ಜನ್ಯ ವಿನಾಕಾರಣ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸ ಅಧಿಕಾರಿಗಳನ್ನು ಅಮಾನತು ಮಾಡಬೇಕು.
ವರದಿ : ಚನ್ನು. ಎಸ್.