ತಾಲೂಕು

ಯಾದಗಿರಿ – ವಿಕಲಚೇತನರಿಗೆ ಅನುಕಂಪ ಬೇಡ, ಅವಕಾಶ ಕೊಡಿ: ಜಿಲ್ಲಾಧಿಕಾರಿ ಡಾ.ಸುಶೀಲ ಬಿ

Share News

ವಿಕಲಚೇತನರಿಗೆ ಅನುಕಂಪ ಬೇಡ, ಅವಕಾಶ ಕೊಡಿ: ಜಿಲ್ಲಾಧಿಕಾರಿ ಡಾ.ಸುಶೀಲ ಬಿ

ವಿಕಲಚೇತನರ ವಿಶೇಷ ಕುಂದುಕೊರತೆ ಸಭೆ ನಡೆಸಿದ ಜಿಲ್ಲಾಧಿಕಾರಿ

ಯಾದಗಿರಿ : ಸತ್ಯಮಿಥ್ಯ ( ಜುಲೈ -19).

ವಿಕಲಚೇತನರು ಅಸಾಹಯಕರಲ್ಲ, ಸದೃಢರಿಗಿಂತಲೂ ವಿಶಿಷ್ಟ ಸಾಧನೆ ಮಾಡಬಲ್ಲರು. ಅವರಿಗೆ ಬೇಕಿರುವುದು ಅನುಕಂಪ ಅಲ್ಲ, ಅವಕಾಶ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ವಿಕಲಚೇತನರ ವಿಶೇಷ ಕುಂದು ಕೊರತೆಗಳ ಸಭೆ ನಡೆಸಿ , ಅವರಿಂದ ಸ್ವೀಕೃತವಾದ ಸಮಸ್ಯೆಗಳಿಗೆ ಸ್ಪಂದಿಸಿ ಅವರು ಮಾತನಾಡಿದರು.

ವಿಕಲ ಚೇತನರ ಅಭಿವೃದ್ಧಿಗೆ ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್‌ ಇಲಾಖೆ ಶೇ.5 ಅನುದಾನವನ್ನು ಕಲ್ಯಾಣ ಕಾರ್ಯಕ್ರಮಗಳಿಗಾಗಿ ಮೀಸಲಿರಿಸಬೇಕು. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ 18 ವರ್ಷ ಪೂರೈಸಿದ ವಿಕಲಚೇತನರಿಗೆ ಜಾಬ್‌ ಕಾರ್ಡ್‌ ವಿತರಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ) ಕಾರ್ಡ್‌ಗಳಲ್ಲಿ ಸಮಸ್ಯೆಗಳು ಕಂಡುಬಂದರೆ ಆದಷ್ಟು ಬೇಗ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ವಿಕಲಚೇತನರಿಗಾಗಿಯೇ ಸರ್ಕಾರ ಅನೇಕ ಸೌಲಭ್ಯ ಒದಗಿಸುತ್ತಿದ್ದು, ಅವರು ಸದ್ಭಳಕೆ ಮಾಡಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಲು ವಿವಿಧ ಇಲಾಖೆಗಳ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ಸೂಚಿಸಿದರು.

ಮಾನವ ಅಭಿವೃದ್ಧಿ ಯೋಜನೆಗಳು ಹಾಗೂ ಈ ಎಲ್ಲ ಸಾಮಾಜಿಕ ಭದ್ರತೆಯ ಕ್ರಮಗಳ ಜೊತೆಗೆ ವಿವಿಧ ಇಲಾಖೆಗಳ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಸಹ ವಿಕಲಚೇತನರೊಡನೆ ಗೌರವದಿಂದ ವರ್ತಿಸಬೇಕು ಎಂದರು.ಸರ್ಕಾರದ ಸಾರಿಗೆ ಬಸ್ ಗಳಲ್ಲಿ ವಿಕಲಚೇತನರಿಗೆ ಸೀಟ್ ಕಡ್ಡಾಯ ಮೀಸಲಿಗೆ ಸೂಕ್ತ ವ್ಯವಸ್ಥೆ ಮಾಡಬೇಕು.ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಹಾಗೂ ಜಿಲ್ಲಾ ಬಸ್ ನಿಲ್ದಾಣಗಳಲ್ಲಿ ಸ್ನೇಹಿ ಶೌಚಾಲಯ ನಿರ್ಮಿಸಬೇಕು. ಕೃಷಿ ಇಲಾಖೆಯಲ್ಲಿ ವಿಕಲಚೇತನರ ರೈತರಿಗೆ ಮೊದಲು ಅಧ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿಯವರಿಗೆ ವಿಕಲಚೇತನರು ಹಲವು ಬೇಡಿಕೆಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಶರಣಗೌಡ ಪಾಟೀಲ, ಕರ್ನಾಟಕ ರಾಜ್ಯ ವಿಕಲಚೇತನರ ಹಕ್ಕುಗಳ ಒಕ್ಕೂಟದ ವಿಭಾಗೀಯ ಅಧ್ಯಕ್ಷ ಸಂಗನಗೌಡ ಧನರೆಡ್ಡಿ ರಾಜಕೋಳೂರು, ಜಿಲ್ಲಾ ಅಧ್ಯಕ್ಷ ಬಸವರಾಜ ಬೈರಮಡ್ಡಿ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ವಿಶ್ವನಾಥರೆಡ್ಡಿ ಆರ್ ಅಬ್ಬೆತುಮಕೂರ, ನಾಗೇಂದ್ರ ದೊರಿ ಸುರಪುರ, ಬಾಬು ಜಾನೆ ಶಹಾಪೂರ, ರವಿ ಐಕೂರ ವಡಿಗೇರಿ, ಮಾಳಪ್ಪ ಪೂಜಾರಿ, ರಮೇಶ ಕೂಡ್ಲೂರು, ನಾಗರಾಜ ಶಹಪುರ, ಭೀಮರಾಯ ಯಾದಗಿರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ : ಶಿವು ರಾಠೋಡ್.


Share News
ನಿಜವಾದ ಮತ್ತು ವಿಶ್ವಾಸಾರ್ಹ ಸುದ್ದಿ ಮಾಧ್ಯಮಕ್ಕೆ ಬಲ ತುಂಬಲು ನೆರವು ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ Scan Code ಮೂಲಕ ನೆರವು ನೀಡಿ

Related Articles

Leave a Reply

Your email address will not be published. Required fields are marked *

Back to top button
error: Content is protected !!