ಜಮಖಂಡಿ:ಸತ್ಯ ಮಿಥ್ಯ (ಜೂ -21)
ದಿನೇ ದಿನೇ ಹೆಚ್ಚುತ್ತಿರುವ ಭೂಮಿಯ ತಾಪಮಾನವನ್ನು ಕಡಿಮೆ ಮಾಡಲು ಹಾಗೂ ಹಸಿರನ್ನು ಹೆಚ್ಚಿಸಿ ಶುದ್ಧ ಗಾಳಿಯನ್ನು ಪಡೆಯಲು ಪ್ರತಿಯೊಬ್ಬ ಮಗು, ಪ್ರತಿಯೊಬ್ಬ ನಾಗರಿಕರು ಮರಗಿಡಗಳನ್ನು ನೆಟ್ಟು ಉಳಿಸಿ ಬೆಳೆಸಬೇಕಾದ ಅಗತ್ಯವಿದೆ, ಇಂದಿನ ದಿನಗಳಲ್ಲಿ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ಅಗತ್ಯವಿದೆ ಎಂದು ಜಮಖಂಡಿ ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ ಹೇಳಿದರು.
ಸಂತೋಷ್ ಕಾಮಗೌಡ ಹುಟ್ಟು ಹಬ್ಬ ಹಾಗೂ ಯೋಗ ದಿನಾಚರಣೆ ನಿಮಿತ್ಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿರುವ ಹಿಂದೂ ರುದ್ರ ಭೂಮಿಯಲ್ಲಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇಂದಿನ ದಿನಮಾನಗಳಲ್ಲಿ ಆರೋಗ್ಯಕರ ಬದುಕನ್ನು ನಡೆಸಲು ಉತ್ತಮ ಜೀವನ ಶೈಲಿಯೊಂದಿಗೆ ಸ್ವಚ್ಚ ಹಾಗೂ ಉತ್ತಮ ಪರಿಸರ ಅತಿ ಅಗತ್ಯವಾಗಿದ್ದು,ಅದಕ್ಕಾಗಿ ನಾವು ಮರ ಗಿಡಗಳನ್ನು ಹೆಚ್ಚು ಹೆಚ್ಚಾಗಿ ಬೆಳೆಸುವ ಮೂಲಕ ಪ್ರಕೃತಿಗೆ ನಮ್ಮ ಕೊಡುಗೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು.
ನಂತರ ಮಾಜಿ ಭೂ ನ್ಯಾಯ ಮಂಡಳಿ ನಾಮ ನಿರ್ದೇಶಿತ ಸದಸ್ಯರಾದ ಉಮೇಶ್ ಜಾಧವ್ ಮಾತನಾಡಿ ಪರಿಸರದಲ್ಲಿ ಮರಗಿಡಗಳನ್ನು ಬೆಳೆಸುವ ಮೂಲಕ ಸೌಂದರ್ಯವನ್ನು ಹೆಚ್ಚಿಸುವದರ ಜೊತೆಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡಲು ಸಾಧ್ಯವಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕಂದಾಯ ಇಲಾಖೆ ಉಪತಹಸೀಲ್ದಾರ್ ವೈ. ಎಚ್. ದ್ರಾಕ್ಷೀ, ಕಂದಾಯ ನಿರೀಕ್ಷಕ ಈಶ್ವರ ಹೊಸಲಕರ್, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಗಿರೀಶ ಕಡಕೋಳ, ಹಿರಿಯರಾದ ರಾಮಣ್ಣ ಬಂಡಿವಡ್ಡರ, ಮಹಾದೇವ ಮಾಳಿ, ಬಸುಗೌಡ ಹೋನವಾಡ, ಕಿರ್ತೀಕುಮಾರ ನಾಂದ್ರೇಕರ, ಉಮೇಶ್ ಮೋಹಿತೆ, ಲಕ್ಷ್ಮಣ್ ಕುಂಬಾರ, ಕಿರಣ ಕದಮ್, ಗ್ರಾಮ ಪಂಚಾಯತ ಸದಸ್ಯರಾದ ಸಿದ್ದಾರ್ಥ್ ತಳಕೇರಿ, ನಂದಕುಮಾರ್ ಕನೇರಿ, ಮಹಾದೇವ ಸಂತಿವೂರ, ರಫೀಕ್ ಅತ್ತಾರ ಸೇರಿದಂತೆ ಯುವಕರು, ಹಿರಿಯರು ಉಪಸ್ಥಿತರಿದ್ದರು.
ವರದಿ : ಸಚಿನ್ ಜಾದವ್.