ಟ್ರೆಂಡಿಂಗ್ ಸುದ್ದಿಗಳು

ಎಡಗೈ ಮತ್ತು ಬಲಗೈ ಸಮುದಾಯಕ್ಕೆ ಶೇ 6 ಹಾಗೂ ಸ್ಪರ್ಶ ಸಮುದಾಯಕ್ಕೆ ಶೇ 5 ರಷ್ಟು ಒಳಮೀಸಲಾತಿಗೆ ಸಂಪುಟ ಒಪ್ಪಿಗೆ !

Share News

ಎಡಗೈ ಮತ್ತು ಬಲಗೈ ಸಮುದಾಯಕ್ಕೆ ಶೇ 6 ಹಾಗೂ ಸ್ಪರ್ಶ ಸಮುದಾಯಕ್ಕೆ ಶೇ 5 ರಷ್ಟು ಒಳಮೀಸಲಾತಿಗೆ ಸಂಪುಟ ಒಪ್ಪಿಗೆ !

ಬೆಂಗಳೂರು : ಸತ್ಯಮಿಥ್ಯ (ಆ -19)

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಕುರಿತು ಇಂದು ವಿಧಾನಸಭೆಯಲ್ಲಿ ಪರ ವಿರೋಧಗಳು ಬಹಳಷ್ಟು ಕೇಳಿ ಬಂದವು. ಆ ಕುರಿತು ಸಾಯಂಕಾಲ 7 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿತ್ತು.

ಒಳಮೀಸಲಾತಿ ಕುರಿತು ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಒಳ ಮೀಸಲಾತಿಯನ್ನು ಮೂರು ಗುಂಪುಗಳಾಗಿ ವಿಂಗಡಿಸಲು ಒಪ್ಪಿಗೆ ಸಿಕ್ಕಿದೆ.

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ವರದಿಯಲ್ಲಿ ಮೀಸಲಾತಿಯನ್ನು 5 ಭಾಗಗಳಾಗಿ ವಿಂಗಡಿಸಲಾಗಿತ್ತು. ಅದಕ್ಕೆ ಪೂರಕವಾಗಿ ಕೇವಲ ಮೂರು ಭಾಗಗಳಾಗಿ ವಿಂಗಡಿಸಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಇದರಲ್ಲಿ ಎಡಗೈ ಸಮುದಾಯಕ್ಕೆ 6%, ಬಲಗೈ ಸಮುದಾಯಕ್ಕೆ 6%,ಸ್ಪರ್ಶ ಸಮುದಾಯಕ್ಕೆ 5%ಒಳಮೀಸಲಾತಿ ನೀಡಲು ಅನುಮೋದನೆ ನೀಡಲಾಗಿದೆ.

ಎಡಗೈ ಸಮುದಾಯದಲ್ಲಿ 18 ಜಾತಿಗಳಿದ್ದರೆ, ಬಲಗೈ ಸಮುದಾಯದಲ್ಲಿ 20 ಜಾತಿಗಳು ಹಾಗೂ ಸ್ಪೃಶ್ಯ ಸಮುದಾಯದಲ್ಲಿ 63 ಜಾತಿಗಳಿವೆ.

ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳಾದ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಹಾಗೂ ಅಧ್ಯಯನ ವರದಿಯನ್ನು ಇತ್ತೀಚೆಗೆ ಸ್ವೀಕರಿಸಲಾಗಿತ್ತು.

ಯಾವ ಜಾತಿಗಳು ಯಾವ ಸಮುದಾಯಕ್ಕೆ ಸೇರುತ್ತವೆ?

ದಲಿತ ಎಡಗೈ ಜಾತಿಗಳು:

ಭಾಂಬಿ, ಅಸದರು, ಅಸೋಡಿ, ಚಮಡಿಯಾ, ಚಮರ್, ಚಂಬರ, ಚಮಗಾರ, ಹರಳಯ್ಯ, ಹರಳಿ, ಖಾಲ್ಪ, ಮಚಿಗಾರ, ಮೋಚಿಗಾರ, ಮಾದರ, ಮಾದಿಗ, ಮೋಚಿ, ಮುಚ್ಚಿ, ತೆಲುಗು ಮೋಚಿ, ಕಾಮತಿ ಮೋಚಿ, ರಾಣಿಗಾರ್, ರೋಹಿದಾಸ್, ರೋಹಿತ್, ಸಮ್ಗರ್, ಹಕ್ಕಳಯ್ಯ, ಧೋರ್ಕ, ಹಕ್ಕಳಯ್ಯ, ಧೋರ್ಕಾ ಹಲಸ್ವರ, ಹಸ್ಲ, ಕಡಯ್ಯನ್, ಕೆಪ್ಮರಿಸ್, ಕೊಲುಪುಲ್ವಂಡಿಯು, ಕುಟುಂಬನ್, ಮಾದಿಗ, ಮಾವಿಲನ್, ಮೊಗೇರ್, ಪಂಚಮ, ಪನ್ನಿಯಾಂಡಿ, ಪರಯ್ಯನ್, ಪರಯ, ಸಮಗಾರ, ಸಾಂಬನ್.

ದಲಿತ ಬಲಗೈ ಜಾತಿಗಳು

ಅಣಮುಕ್, ಅರೆ ಮಾಳ, ಅರವ ಮಾಳ, ಬಲಗೈ, ಛಲವಾದಿ, ಚಲವಾದಿ, ಚನ್ನಯ್ಯ, ಪಲ್ಲನ್, ಹೊಲಯ, ಹೊಲೆಯ, ಹೊಲೆಯ, ಮಹ್ಯವಂಶಿ, ಧೇಡ್, ವಂಕರ್, ಮಾರು ವಂಕರ್, ಮಾಳ, ಮಲ ಹಣ್ಣಾಯಿ, ಮಾಳ ಜಂಗಮ, ಮಾಳ ಮಾಸ್ತಿ, ಮಲ ಮಾರಾಟ, ನೆಟ್ಕಣಿ, ಮಹಾರ್, ತರಲ್, ಧೇಳು, ದೇಗುಲ ಮೇಗುಂದ,ಆದಿ ಆಂಧ್ರ, ಆದಿ ದ್ರಾವಿಡ, ಆದಿ ಕರ್ನಾಟಕ.

ಇತರೆ 5% ಮೀಸಲಾತಿ ಒಳಪಡುವ ಜಾತಿಗಳು

ಬಕುಡ, ಬಂಜಾರ, ಲಂಬಾಣಿ, ಲಂಬಾಡ, ಲಂಬಾಡಿ, ಲಮಾಣಿ, ಸುಗಾಲಿ, ಸುಕಾಲಿ; ಭೋವಿ, ಓಡ್, ಒಡ್ಡೆ, ವಡ್ಡರ, ವಡ್ಡರ, ವಡ್ಡರ, ವಡ್ಡರ, ಕಲ್ಲುವಡ್ಡರ, ಬೋವಿ (ಬೆಸ್ತರಲ್ಲದ), ಮಣ್ಣುವಡ್ಡರ; ಎಲ್ಲಮಾಳ್ವಾರ್, ಯೆಲ್ಲಮ್ಮಲವಾಂಡ್ಲು; ಕೊರಚ, ಕೊರಚಾರ್; ಕೊರಮ, ಕೊರವ, ಕೊರವರ; ಲಿಂಗಾಡರ್; ಮುಕ್ರಿ; ಮುಂಡಾಲ; ಪಂಬದ; ಸಪಾರಿ; ತಿರ್ಗರ್, ತಿರ್ಬಂದ.

ನಾಳೆ ಈ ಮಸೂದೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಲಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.

ವರದಿ : ಚನ್ನು. ಎಸ್.


Share News
ನಿಜವಾದ ಮತ್ತು ವಿಶ್ವಾಸಾರ್ಹ ಸುದ್ದಿ ಮಾಧ್ಯಮಕ್ಕೆ ಬಲ ತುಂಬಲು ನೆರವು ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ Scan Code ಮೂಲಕ ನೆರವು ನೀಡಿ

Related Articles

Leave a Reply

Your email address will not be published. Required fields are marked *

Back to top button
error: Content is protected !!