ಟ್ರೆಂಡಿಂಗ್ ಸುದ್ದಿಗಳು

ರಾಜ್ಯಪಾಲರ ಭೇಟಿ ಹಿನ್ನೆಲೆಯಲ್ಲಿ ನಗರದ ಪ್ರಮುಖ ಬೀದಿಗಳು ಸ್ವಚ್ಛತೆ.

Share News

ರಾಜ್ಯಪಾಲರ ಭೇಟಿ ಹಿನ್ನೆಲೆಯಲ್ಲಿ ನಗರದ ಪ್ರಮುಖ ಬೀದಿಗಳು ಸ್ವಚ್ಛತೆ.


ಗಜೇಂದ್ರಗಡ:ಸತ್ಯಮಿಥ್ಯ (ಜು -21)

ನಾಳೆ ನಗರಕ್ಕೆ ರಾಜ್ಯಪಾಲರ ಭೇಟಿಯ ಹಿನ್ನೆಲೆಯಲ್ಲಿ ಗಜೇಂದ್ರಗಡ ಪುರಸಭೆ ಸಿಬ್ಬಂದಿಗಳಿಂದ ಪಟ್ಟಣದ ಪ್ರಮುಖ ಬೀದಿಗಳು ಹಾಗೂ ಕಾರ್ಯಕ್ರಮ ನಡೆಯುವ ಮಾರ್ಗಗಳಲ್ಲಿ ಭರದಿಂದ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ.

ಇಲ್ಲಿನ ಭಗವಾನ್ ಮಹಾವೀರ ಜೈನ ಆಯುರ್ವೇದ ಮೆಡಿಕಲ್ ಕಾಲೇಜು, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಾಳೆ (ಜುಲೈ 22) ರಾಜ್ಯಪಾಲರಾದ ಥಾವರ್‌ಚಂದ್ ಗೆಹಲೋತ್ ಅವರು ಪಟ್ಟಣಕ್ಕೆ ಭೇಟಿ ನೀಡಲಿದ್ದಾರೆ.

ಪುರಸಭೆ ಮುಖ್ಯಾಧಿಕಾರಿ ಬಸವರಾಜ ಬಳಗಾನೂರ ಅವರು ಮಂಗಳವಾರ ಸ್ವಚ್ಛತಾ ಕಾರ್ಯ ನಡೆಯುತ್ತಿರುವ ಸ್ಥಳಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಾಜ್ಯಪಾಲರ ಆಗಮನದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಹಾಗೂ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ.

ವರದಿ : ಸುರೇಶ ಬಂಡಾರಿ.


Share News
ನಿಜವಾದ ಮತ್ತು ವಿಶ್ವಾಸಾರ್ಹ ಸುದ್ದಿ ಮಾಧ್ಯಮಕ್ಕೆ ಬಲ ತುಂಬಲು ನೆರವು ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ Scan Code ಮೂಲಕ ನೆರವು ನೀಡಿ

Related Articles

Leave a Reply

Your email address will not be published. Required fields are marked *

Back to top button
error: Content is protected !!