ಜಿ. ಎಸ್.ಪಾಟೀಲ ನೇತೃತ್ವದಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆಗಸ್ಟ್19 ರಂದು ಬೃಹತ್ ಪ್ರತಿಭಟನೆ
ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ 19ರಂದು.
ಗದಗ:ಸತ್ಯಮಿಥ್ಯ ( ಆಗಸ್ಟ್ 17).
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಪಕ್ಷಪಾತಿ ನಡೆಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಆ. 19ರಂದು ಬೆಳಿಗ್ಗೆ 11ಕ್ಕೆ ಬೃಹತ್ ಪ್ರತಿಭಟನೆ ನಡೆಯಲಿದೆ.
ತದನಂತರ ಟಿಪ್ಪು ಸುಲ್ತಾನ್ ವೃತ್ತದಿಂದ ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನಾ ರ‍್ಯಾಲಿ ಮೂಲಕ ತೆರಳಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು.
ಗದಗ ಜಿಲ್ಲಾ ಕಾಂಗ್ರೆಸ್ ಕಮೀಟಿಯ ಅಧ್ಯಕ್ಷರೂ ಆಗಿರುವ, ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ ಅವರು ನೇತೃತ್ವ ವಹಿಸುವರು. ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್. ಕೆ.ಪಾಟೀಲ, ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಪಕ್ಷದ ಮುಖಂಡರಾದ ಆನಂದಸ್ವಾಮಿ ಗಡ್ಡದೇವರಮಠ, ಸುಜಾತಾ ದೊಡ್ಡಮನಿ ಪಾಲ್ಗೊಳ್ಳುವರು.
ಕಾರಣ ಬೃಹತ್ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಹಾಗೂ ಹಾಲಿ ಶಾಸಕರುಗಳು, ಪಕ್ಷದ ಜಿಲ್ಲಾ ಪಧಾದಿಕಾರಿಗಳು ಬ್ಲಾಕ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ, ಗ್ರಾಮ ಪಂಚಾಯತ, ಎಪಿಎಂಸಿ ಪಕ್ಷದ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು ಹಾಗೂ ನಗರಸಭೆ ಪಟ್ಟಣ ಪಂಚಾಯ್ತಿ ಪುರಸಭೆ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್‌ಸಿ/ಎಸ್‌ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ಸಾಮಾಜಿಕ ಜಾಲತಾಣ, ರಾಜೀವಗಾಂಧಿ ಪಂಚಾಯತ ಸಂಘಟನೆ, ಮಾಜಿ ಸೈನಿಕರ ವಿಭಾಗ, ಮೀನುಗಾರ ವಿಭಾಗ, ಕಾರ್ಮಿಕರ ವಿಭಾಗ, ಐ,ಎನ್,ಟಿ,ಯು,ಸಿ, ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಮತ್ತು ಖೆತ್ ಮಜದೂರ ವಿಭಾಗ, ಮಾಜಿ ಸೈನಿಕರ ವಿಭಾಗ, ವೈದ್ಯರ ವಿಭಾಗ, ವೃತ್ತಿಪರ ವಿಭಾಗ, ಪದವಿಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ, ವಿಕಲಚೇತನರ ವಿಭಾಗ, ಲಿಗಲ್ ರೀಪಾರ್ಮ್ಸ್ ವಿಭಾಗ, ಐ,ಟಿ, ಮತ್ತು ಡಾಟಾ ವಿಭಾಗ, ಮಾಧ್ಯಮ ಮತ್ತು ಸಂಪರ್ಕ ಇಲಾಖೆ ವಿಭಾಗ, ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಪಕ್ಷದ ಅಭಿಮಾನಿಗಳು ಪಾಲ್ಗೊಳ್ಳಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾದ ವಿ.ಬಿ. ಸೋಮನಕಟ್ಟಿಮಠ, ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಬಿ.ಬಿ. ಅಸೂಟಿ ಹಾಗೂ ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ.ಅಶೋಕ ಮಂದಾಲಿಯವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
ವರದಿ :ಮುತ್ತು.