
“ಸ್ವಾತಂತ್ರ್ಯ ಸೇನಾನಿಗಳ ಸ್ಮರಣೆ” ಶೀರ್ಷಿಕೆ ಅಡಿಯಲ್ಲಿ ನಡೆದ ಭಾಷಣ ಸ್ಪರ್ಧೆ.

ರಾಮಾಪುರ/ಗಜೇಂದ್ರಗಡ:ಸತ್ಯಮಿಥ್ಯ (ಆ-14).
“ಸ್ವಾತಂತ್ರ್ಯ ಸೇನಾನಿಗಳ ಸ್ಮರಣೆ” ಎಂಬ ಶೀರ್ಷಿಕೆ ಅಡಿಯಲ್ಲಿ ಭಾಷಣ ಸ್ಪರ್ಧೆಯನ್ನು.ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್ತು ಗಜೇಂದ್ರಗಡ ತಾಲೂಕಾ ಘಟಕ ಹಾಗೂ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಗಜೇಂದ್ರಗಡ ಇವುಗಳ ಸಹಯೋಗದಲ್ಲಿ ಗಜೇಂದ್ರಗಡ ತಾಲೂಕಿನ ರಾಮಾಪೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿಗಳಾಗಿ ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಗರಾಜ ನಾಯಕ ಮಾತನಾಡಿ. ವಿದ್ಯಾರ್ಥಿಗಳು ಇತ್ತಿಚೆಗೆ ಆತ್ಮಸ್ಥೈರ್ಯವನ್ನು ಕಳೆದುಕೊಳ್ಳುತ್ತಿದ್ದು ಪುಸ್ತಕಗಳಿಂದ ದೂರ ಉಳಿದುಕೊಳ್ಳುತ್ತಿದ್ದಾರೆ ಹಾಗಾಗಿ ನಾವು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ದುಚ್ಛಟಗಳಿಂದ ದೂರವಾಗಲು ಇಂತಹ ಕಾರ್ಯಕ್ರಮಗಳು ಅವಶ್ಯಕ ಎಂದು ಕಿವಿ ಮಾತು ಹೇಳಿದರು.
ಗಜೇಂದ್ರಗಡ ತಾಲೂಕಿನ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಮತಿ ರೇಣುಕಾ ಏವೂರು ಮಾತನಾಡಿ.ಮಕ್ಕಳು ಸಾಹಿತ್ಯ ಅಭಿರುಚಿ ಬೆಳೆಸಿಕೊಂಡು ತಮ್ಮ ಜ್ಞಾನವನ್ನು ಬೆಳೆಸಿಕೊಳ್ಳಬೇಕು ಮತ್ತು ವಿದ್ಯಾರ್ಥಿಗಳು ಸಮಯ ಪ್ರಜ್ಞೆ ಜೊತೆಗೆ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು ಎಂದು ಅಭಿಪ್ರಾಯ ಪಟ್ಟರು.
ಮಕ್ಕಳ ಸಾಹಿತ್ಯ ಪರಿಷತ್ತಿನ ಸದಸ್ಯರಾದ ಚಂದ್ರು ರಾಠೋಡ ಮಾತನಾಡಿ. ಮಕ್ಕಳು ಕೈಯಲ್ಲಿ ಮೋಬೈಲ್ ಮತ್ತು ಅತಿಯಾದ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವದು ಸರಿಯಲ್ಲ ಈ ನಿಟ್ಟಿನಲ್ಲಿ ಪಾಲಕರು ಗಮನಹರಿಸಬೇಕು ಎಂದರು.
ಶಾಲೆಯ ಪ್ರಧಾನ ಗುರುಮಾತೆಯರಾದ ಆರ್. ಡಿ. ಹಿರೇಹಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ.ಇಂತಹ ಸಂಘಟಿಕರು ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದಕ್ಕೆ ಹೆಮ್ಮೆ ಪಡುತ್ತಾ ಅತಿ ಹೆಚ್ಚು ಮಕ್ಕಳಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಿದ್ದಕ್ಕೆ ಧನ್ಯವಾದಗಳು ಎಂದರು.
ಕಾರ್ಯಕ್ರಮದಲ್ಲಿ ಶ್ರೀಮತಿ ಎಸ್.ಕೆ ಹೊರಪೇಟೆ, ಎಸ್.ಎಸ್.ಡೊಳ್ಳಿನ, ಎಮ್.ವಿ ಇಂಜನಿ, ಎಚ್.ವೈ, ಕುರಿ, ಬಿ.ಜಿ ಕಳಕಾಪೂರ,ಮುಂತಾದವರು ಉಪಸ್ಥಿತರಿದ್ದರು.
ವರದಿ : ಸುರೇಶ ಬಂಡಾರಿ.