ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ – ಬಸವರಾಜ ರಾಯರೆಡ್ಡಿ.
ಶಿಕ್ಷಕರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು:-ರಾಯರೆಡ್ಡಿ
ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ – ಬಸವರಾಜ ರಾಯರೆಡ್ಡಿ.
ಶಿಕ್ಷಕರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು:-ರಾಯರೆಡ್ಡಿ
ಕುಕನೂರ: ಸತ್ಯಮಿಥ್ಯ ( ಸ-12).
ಪ್ರತಿಯೊಬ್ಬ ವಿದ್ಯಾರ್ಥಿಗಳ ಬೆಳವಣಿಗೆಗೆ ಮುಖ್ಯ ಪಾತ್ರ ಶಿಕ್ಷಕರದು, ಆದ್ದರಿಂದ ಪ್ರತಿಯೊಬ್ಬ ಶಿಕ್ಷಕರ ಪಾತ್ರ ಬಹು ಮುಖ್ಯವಾದುದ್ದು ಆದ್ದರಿಂದ ಶಿಕ್ಷಕರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಶಿಕ್ಷಕರಿಗೆ ತಿಳಿಸಿದರು.
ಯಲಬುರ್ಗಾ ಪಟ್ಟಣದ ಬುದ್ಧ ಬಸವ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ ರವರ 136 ನೇ ಜನ್ಮ ದಿನಾಚರಣೆ ಅಂಗವಾಗಿ, ಶಿಕ್ಷಕರ ದಿನಾಚರಣೆ. ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಹಾಗೂ ಶೈಕ್ಷಣಿಕ ಕಾರ್ಯಗಾರ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತ್ ಕೊಪ್ಪಳ ತಾಲೂಕು ಪಂಚಾಯತ್ ಯಲಬುರ್ಗಾ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಶಿಕ್ಷಕ ವೃತ್ತಿ ಎಂದು ಕಮರ್ಷಿಯಲ್ ಆಗಬಾರದು, ಶಿಕ್ಷಕರ ವೃತ್ತಿ ವ್ಯಾಪಾರಿಕರಣ ಆಗಬಾರದು, ವಿದ್ಯಾ ಮತ್ತು ಅನ್ನದಾನ ಮಹತ್ವದ ಆಗಿದೆ.ಪ್ರತಿಯೊಬ್ಬ ವಿದ್ಯಾರ್ಥಿಗಳನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ ಆಗಿದೆ ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಗೂ ಶಿಕ್ಷಣದ ಜೊತೆಗೆ ವಿವೇಚನ ಕಲಿಸುವುದು ಮುಖ್ಯ ಹಿಂದಿನ ಕಾಲದಲ್ಲಿ ಸಾಕ್ಷರತೆ ಪ್ರಮಾಣ ಇರಲಿಲ್ಲ, ಇಂದು ಬದಲಾದ ಕಾಲಘಟ್ಟದಲ್ಲಿ ಶಿಕ್ಷಣದ ಸಾಕ್ಷರತೆ ಪ್ರಮಾಣ ಹೆಚ್ಚಳವಾಗಿದೆ. ಆದ್ದರಿಂದ ಗ್ರಾಮೀಣ ಪ್ರದೇಶದ ಶಿಕ್ಷಕರು ಹೆಚ್ಚಿನ ಜವಾಬ್ದಾರಿಯನ್ನು ಹೊಂದಬೇಕಾಗಿದೆ.
ಪ್ರತಿಯೊಬ್ಬ ವಿದ್ಯಾರ್ಥಿಯು ಇಂಗ್ಲೀಷ್ ಮೀಡಿಯಂ ವ್ಯಾಮೋಹ ಬಿಡಬೇಕು ಇಂಗ್ಲೀಷ್ ಭಾಷೆಯ ವಿದ್ಯಾಭ್ಯಾಸ ಮಾಡಿದರೆ ಮಾತ್ರ ಕೆಲವೊಂದು ಹುದ್ದೆಗಳು ಸಿಗುತ್ತವೆ ಎಂದು ಭಾವಿಸುವುದು ತಪ್ಪು ನಾನು ಕನ್ನಡ ಶಾಲೆಗಳಿಗೆ ಹೆಚ್ಚು ಗೌರವ ನೀಡುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಸಹ ಕನ್ನಡ ಶಾಲೆ ಎಂದರೆ ಬಹಳ ಇಷ್ಟ ಕನ್ನಡ ಶಾಲೆಗಳಲ್ಲಿ ನಿಮ್ಮ ಮಕ್ಕಳ ವಿದ್ಯಾಭ್ಯಾಸವನ್ನು ಮಾಡಿಸಿ.
ಯಲಬುರ್ಗಾ ಪಟ್ಟಣದಲ್ಲಿ 2.50 ಕೋಟಿ ರೂ ವೆಚ್ಚದಲ್ಲಿ ಬಿ ಓ ಕಚೇರಿ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡುತ್ತಿದ್ದೇನೆ ಶೀಘ್ರದಲ್ಲಿ ಭೂಮಿ ಪೂಜೆಯನ್ನು ಕೂಡ ನೆರವೇರಿಸಲಾಗುವುದು.
ಡಾ. ಸರ್ವಪಲ್ಲಿ ರಾಧಾಕೃಷ್ಣರ ಆದರ್ಶಗಳನ್ನು ಅಳವಡಿಸಿಕೊಳ್ಳಿ, ತಾಲೂಕಿನಲ್ಲಿ ಪ್ರತಿಯೊಬ್ಬ ಶಿಕ್ಷಕರ ಪಾತ್ರ ಬಹುಮುಖ್ಯ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಪ್ರಾಧ್ಯಾಪಕ ಶರಣಬಸಪ್ಪ ಬಿಳಿಯಲಿ ಉಪನ್ಯಾಸ ನೀಡಿದರು.ಅಶೋಕ ಗೌಡರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಾಸ್ತಾವಿಕ ನುಡಿಗಳ ನಾಡಿದರು.
ಈ ಸಂದರ್ಭದಲ್ಲಿಮುಖಂಡರಾದಬಸವರಾಜ ಉಳ್ಳಾಗಡ್ಡಿ, ಯಂಕಣ್ಣ ಯರಾಶಿ, ವೀರನಗೌಡ ಪೊಲೀಸ ಪಾಟೀಲ, ಎ. ಜಿ. ಭಾವಿಮನಿ, ಕೆರಿಬಸಪ್ಪ ನಿಡಗುಂದಿ, ಟಿ.ಜಿ.ದಾನಿ ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ, ವೀರಭದ್ರಪ್ಪ ಅಂಗಡಿ ದೈಹಿಕ ಶಿಕ್ಷಣ ಪರೀಕ್ಷಕರು,ನೌಕರ ಸಂಘದ ಅಧ್ಯಕ್ಷ ವೈ. ಜಿ. ಪಾಟೀಲ, ಮಹೇಶ ಸಬರದ, ಈಶಪ್ಪ ಮಳಗಿ, ಫಕೀರಪ್ಪ ವಜ್ರಬಂಡಿ, ಬಸವರಾಜ ಮೇಟಿ, ಪೀರ ಸಾಬ ದಪೇದಾರ, ಮಾರುತೇಶ ತಳವಾರ, ಮಂಜುನಾಥ್ ತೆಗ್ಗಿನಮನಿ, ಸಿದ್ಲಿಂಗಪ್ಪ ಶ್ಯಾಗೋಟಿ, ಸುರೇಶ ಅಬ್ಬಿಗೇರಿ, ಎಪ್.ಎಂ. ಕಳ್ಳಿ ಶಿಕ್ಷಕರು ಮತ್ತು ಶಿಕ್ಷಕಿಯರು ಇತರರು ಇದ್ದರು.
ವರದಿ : ಚನ್ನಯ್ಯ ಹಿರೇಮಠ.