ವಿಕಲಚೇತನರಿಗೆ ವಿವಿಧ ಯೋಜನೆ: ಅರ್ಜಿ ಆಹ್ವಾನ
ಕೊಪ್ಪಳ: ಸತ್ಯಮಿಥ್ಯ (ಜುಲೈ-24).
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2024-25ನೇ ಸಾಲಿಗೆ ವಿವಿಧ ಯೋಜನೆಗಳಡಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇಲಾಖೆಯಿಂದ ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಗೆ ಯಂತ್ರ ಯೋಜನೆ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್ ಯೋಜನೆಗಳಡಿ ಪ್ರಸಕ್ತ ಸಾಲಿನಲ್ಲಿ ನಿಗದಿತ ಗುರಿಯಂತೆ ಕಡಿಮೆ ಅರ್ಜಿಗಳು ಸ್ವೀಕೃತವಾಗಿದ್ದು, ಪುನಃ ಅರ್ಜಿ ಆಹ್ವಾನಿಸಲಾಗಿದ್ದು, ಜಿಲ್ಲೆಯ ಅರ್ಹ ವಿಕಲಚೇತನರು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಸೇವಾಸಿಂಧು https://sevasindhu.karnataka.gov.in/ (Sevasindhu/DepartmentServicesKannada) ಪೋರ್ಟ್ಲ್‌ನಲ್ಲಿ ಆಗಸ್ಟ್ 31ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಿದ ಒಂದು ಝರಾಕ್ಸ್ ಪ್ರತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯ ಆವರಣ, ಕೊಠಡಿ ಸಂಖ್ಯೆ 31,32 ರಿಲಾಯನ್ಸ್ ಪೆಟ್ರೋಲ್ ಬಂಕ್ ಎದುರುಗಡೆ, ಹೊಸಪೇಟೆ ರಸ್ತೆ ಕೊಪ್ಪಳ, ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಎಂ.ಆರ್.ಡಬ್ಲೂಗಳಾದ ಕೊಪ್ಪಳದ ಜಯಶ್ರೀ ಮೊ.ಸಂ: 9980126391, ಯಲಬುರ್ಗಾದ ಬಸವರಾಜ ಮೊ.ಸಂ: 9591923910, ಕುಷ್ಟಗಿಯ ಚಂದ್ರಶೇಕರ ಮೊ.ಸಂ: 9916308585 ಹಾಗೂ ಗಂಗಾವತಿಯ ಮಂಜುಳಾ ಮೊ.ಸಂ: 7975398202, ಇವರನ್ನು ಹಾಗೂ ಗ್ರಾಮ ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿ.ಆರ್.ಡಬ್ಲೂ ಹಾಗೂ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯು.ಆರ್.ಡಬ್ಲೂಗಳನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.